ನಮ್ಮ ದೇಶದ ಇತಿಹಾಸದ ಜತೆ ಟಿಪ್ಪು ಹೆಸರು ಸೇರಿಕೊಂಡಿದೆ; ಡಿ.ಕೆ.ಶಿವಕುಮಾರ್

ಬೆಂಗಳೂರು : ಪಠ್ಯ ಪುಸ್ತಕಗಳಿಂದ ಟಿಪ್ಪು ಹೆಸರನ್ನು ಕೈ ಬಿಡುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದೇಶದ ಇತಿಹಾಸ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ದೇಶದ ಇತಿಹಾಸದ ಜತೆ ಟಿಪ್ಪು ಹೆಸರು ಸೇರಿಕೊಂಡಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಈ ಹಿಂದೆ ರಾಷ್ಟ್ರಪತಿಯವರು ಟಿಪ್ಪು ಅವರನ್ನು ಹೊಗಳಿದ್ದರು. ರಾಜ್ಯಪಾಲರು ಟಿಪ್ಪು ಸೇವೆ ಬಗ್ಗೆ ಕೊಂಡಾಡಿದ್ದಾರೆ. ಅಬ್ದುಲ್ ಕಲಾಂ ಕೂಡ ಟಿಪ್ಪು ಬಗ್ಗೆ ಮಾತನಾಡಿದ್ದರು. ಟಿಪ್ಪು ಈ ದೇಶದ ಇತಿಹಾಸದಲ್ಲಿ ಬೆರೆತಿರುವಾಗ ನಾವು ಯಾವುದೇ ಆತುರದ ನಿರ್ಧಾರವನ್ನು ಕೈಗೊಂಡು ಬದಲಿಸಲು ಆಗದು. ದೇಶದ ಇತಿಹಾಸವನ್ನು ಹೊಸದಾಗಿ ಸೇರಿಸಲು, ತಿರುಚಲು ಸಾಧ್ಯವಿಲ್ಲ ಎಂದರು.

ಪಠ್ಯ ಕ್ರಮದಿಂದ ಟಿಪ್ಪು ಹೆಸರು ಕೈಬಿಡುವ ವಿಚಾರವಾಗಿ ಈಗಾಗಲೇ ಸರ್ಕಾರ ಸಮಿತಿ ರಚಿಸಿದೆ. ಸಮಿತಿಯಲ್ಲಿ ತಜ್ಞರಿದ್ದಾರೆ. ಪ್ರಾಜ್ಞರಿದ್ದಾರೆ ಹೀಗಾಗಿ ನಾವು ಈ ವಿಚಾರದ ಬಗ್ಗೆ ಮಾತನಾಡುವುದು ಬೇಡ ಎಂದು ಹೇಳಿದರು.

ಇದೇ ವೇಳೆ ಮಾರ್ಚ್ 31ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಶಿವಕುಮಾರ ಸ್ವಾಮೀಜಿ ಜಯಂತಿ ಅಂಗವಾಗಿ ರಾಹುಲ್ ಗಾಂಧಿ ತುಮಕೂರು ಸಿದ್ಧಗಂಗಾ ಮಠಕ್ಕೆ ಆಗಮಿಸಿ, ಶಿವಕುಮಾರಸ್ವಾಮಿಜಿಗಳ ಗದ್ದುಗೆ ಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಇನ್ನು ಏಪ್ರಿಲ್ 1ರಂದು ರಾಹುಲ್ ನೇತೃತ್ವದಲ್ಲಿ ಹಿರಿಯ ನಾಯಕರ ಸಭೆ ನಡೆಯಲಿದೆ ಸಭೆ ಬಳಿಕ ಸದಸ್ಯತ್ವ ನೋಂದಣಿ ಅಭಿಯಾನದ ಕುರಿತು ಜೂಮ್ ಮೀಟಿಂಗ್ ನಡೆಯಲಿದೆ ಎಂದು ಹೇಳಿದರು.

Gayathri SG

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

6 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

6 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

7 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

7 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

8 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

8 hours ago