News Karnataka Kannada
Monday, May 06 2024
ಬೆಂಗಳೂರು ನಗರ

ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ: ಸಿಎಂ ಬೊಮ್ಮಾಯಿ

Cm Bommayi
Photo Credit : News Kannada

ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ,ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ.

ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು. ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.ಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖಾರ್ಕೀವ್, ಕೀವ್ ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವರು ಭಾಗವಹಿಸುವ ಜಲಜೀವನ್ ಮಿಷನ್ ಕುರಿತು ದಕ್ಷಿಣ ರಾಜ್ಯಗಳ ಪ್ರಾದೇಶಿಕ ಸಭೆಯಲ್ಲಿ ಭಾಗವಹಿಸಿ ನಂತರ ಶಿಕಾರಿಪುರದಲ್ಲಿ ರೈತರ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ರಾಣಿಬೆನ್ನೂರಿನಲ್ಲಿ ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಅವರ ತಂದೆಯವರನ್ನು ಭೇಟಿಯಾಗಲಿದ್ದೇನೆ ಎಂದರು. ಸರಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದು ಸಿಎಂ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು