ಬೆಂಗಳೂರು : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಜೆ ನೀಡಲಾಗಿದ್ದ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಸ್ನಾತಕೋತ್ತರ ತರಗತಿಗಳನ್ನು ಬುಧವಾರದಿಂದಲೇ ಪುನಾರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಹೀಗಾಗಿ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ಬಗೆಯ ಶಿಕ್ಷಣ ಸಂಸ್ಥೆಗಳಲ್ಲೂ ಭೌತಿಕ ತರಗತಿಗಳು ಮತ್ತೆ ಆರಂಭವಾಗಲಿವೆ. ರಜೆ ಹಿನ್ನೆಲೆಯಲ್ಲಿ ಈ ಸಂಸ್ಥೆಗಳಲ್ಲಿ ಆನ್ ಲೈನ್ ತರಗತಿಗಳನ್ನು ನಡೆಸಲಾಗುತ್ತಿದ್ದುದನ್ನು ಇಲ್ಲಿ ಸ್ಮರಿಸಬಹುದು.