ನಾಳೆಯಿಂದ ಮತ್ತೆ ಮೂರು ದಿನ ಮಳೆಯಾಗುವ ಮುನ್ಸೂಚನೆ

ಬೆಂಗಳೂರು,ನ.26 : ವಾಯುಭಾರ ಕುಸಿತದ ಪರಿಣಾಮ ರಾಜ್ಯ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ನಾಳೆಯಿಂದ ಮತ್ತೆ ಮೂರು ದಿನ ಮಳೆಯಾಗುವ ಮುನ್ಸೂಚನೆಗಳಿವೆ. ತಮಿಳುನಾಡು, ಕರಾವಳಿ ಭಾಗದಲ್ಲಿ ಉಂಟಾಗಿರುವ ವಾಯುಭಾರತ ಕುಸಿತದಿಂದ ಮತ್ತೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ನಾಳೆಯಿಂದ ಸೋಮವಾರದವರೆಗೂ ರಾಜ್ಯದ ಒಳನಾಡಿನಲ್ಲಿ ಮಳೆಯಾಗಲಿದೆ.

ಆದರೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪಕ ಉಸ್ತುವಾರಿ ಕೇಂದ್ರದ ನಿವೃತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೆಲವೆಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ಇಂದು ಮಳೆಯಾಗುವ ಸಾಧ್ಯತೆ ವಿರಳವಾಗಿದೆ ಎಂದು ಹೇಳಿದರು.

ಚಾಮರಾಜನಗರ, ಮೈಸೂರು, ಗುಂಡ್ಲುಪೇಟೆ, ಮಂಡ್ಯ, ಕೆ.ಆರ್.ಪೇಟೆ, ಹುಣಸೂರು, ಮಡಿಕೇರಿ, ಧರ್ಮಸ್ಥಳ, ಮಂಗಳೂರು ಭಾಗಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಭಾನುವಾರ ತುಮಕೂರಿನ ಪಾವಗಡ, ಶಿರಾ, ಕಿತ್ತೂರು, ಚಿತ್ರದುರ್ಗ, ಕೊಟ್ಟೂರು, ಹರಪನಹಳ್ಳಿ, ಹಡಗಲಿ, ಹೊಸದುರ್ಗ, ಶಿಕಾರಿಪುರ ಸೇರಿದಂತೆ ರಾಜ್ಯದ ಮಧ್ಯಭಾಗದಲ್ಲಿ ಮಳೆಯಾಗಲಿದೆ. ಸೋಮವಾರ ಹೈದರಾಬಾದ್ ಕರ್ನಾಟಕ ಭಾಗದ ಬಾದಾಮಿ, ಬಾಗಲಕೋಟೆ, ನರಗುಂದ ಸೊಲ್ಲಾಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ವಿವರಿಸಿದರು.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

17 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

18 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

39 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

49 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

51 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

1 hour ago