ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಕರೆ ಕೊಟ್ಟ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುವಂತೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.ದೇಶದ ಸ್ವಾಭಿಮಾನವನ್ನು, ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದ್ದು ನಮ್ಮ ಕರ್ತವ್ಯ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವಂತೆ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಷ್ಟ್ರದ್ರೋಹವೆಸಗಿರುವ, ಸಂವಿಧಾನಕ್ಕೆ ಅಪಮಾನ ಮಾಡಿರುವ ಸಚಿವ ಈಶ್ವರಪ್ಪ ಅವರನ್ನು ವಜಾಗೊಳಿಸುವಂತೆ ಕಳೆದ ನಾಲ್ಕು ದಿನಗಳಿಂದ ಸದನದಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಪ್ರತಿ ತಾಲೂಕು, ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ತಿಳಿಸಿದ್ದಾರೆ. ಈ ಮೂಲಕ ಸಚಿವ ಈಶ್ವರಪ್ಪ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ತಿಳಿಸಿದ್ದಾರೆ.

Swathi MG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

4 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

4 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

4 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

4 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

6 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

6 hours ago