News Karnataka Kannada
Thursday, May 02 2024
ಬೆಂಗಳೂರು ನಗರ

ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಮತಾಂತರ ನಿಷೇಧ ಕಾಯ್ದೆ ರದ್ದು: ಸಿದ್ದರಾಮಯ್ಯ

Siddaramaih
Photo Credit :

ಬೆಂಗಳೂರು, ಡಿ. 27; “ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದರು.

ಸೋಮವಾರ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021’ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಸರ್ಕಾರ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಿ ವಿಧಾನಸಭೆಯಲ್ಲಿ ಒಪ್ಪಿಗೆ ಪಡೆದಿದೆ.

“ಜನಾಕ್ರೋಶಕ್ಕೆ ಮಣಿಯದೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ” ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಹೇಳಿದ್ದಾರೆ.

“ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

“ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು? 2015 ರಲ್ಲಿ ಮತಾಂತರ ನಿಷೇಧ ಕಾಯ್ದೆಯ ಕಡತ ಸಂಪುಟ ಚರ್ಚೆಗೆ ಬರದಂತೆ ತಡೆಯಲು ಅಂದಿನ ಸಮಾಜ ಕಲ್ಯಾಣ ಸಚಿವರಾಗಿದ್ದ ಹೆಚ್. ಆಂಜನೇಯ ಅವರಿಗೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿದ್ದೇ ನಾನು. ನಮಗೆ ಇಂತಹ ಮನುಷ್ಯ ವಿರೋಧಿ ಕಾನೂನಿನಲ್ಲಿ ಹಿಂದೆಯೂ ಆಸಕ್ತಿ ಇರಲಿಲ್ಲ, ಈಗಲೂ ಇಲ್ಲ” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು