ಇನ್ನ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕು.
ಮುಂದಿನ ಎಲೆಕ್ಷನ್ನಲ್ಲಿ ಬಿಜೆಪಿ ಸರ್ಕಾರವನ್ನ ಕಿತ್ತೆಸೆಯಬೇಕು. 6 ತಿಂಗಳ ಮೊದಲೇ ಅಭ್ಯರ್ಥಿಗಳನ್ನ ಘೋಷಿಸಬೇಕು ಎಂದು ರಾಹುಲ್ ಗಾಂಧಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಪ್ರತಿ ಮನೆಗೂ ತೆರಳಿ ಬಿಜೆಪಿ ನಾಟಕ ಬಯಲು ಮಾಡಬೇಕು ಎಂದೂ ಸಿದ್ದರಾಮಯ್ಯ ಅವರು ತಮ್ಮ ಕಾರ್ಯಕರ್ತರಿಗೆ ಕರೆಕೊಟ್ಟರು.