News Karnataka Kannada
Thursday, May 02 2024
ಬೆಂಗಳೂರು ನಗರ

ನಾವೇ ಮುಂದೆ ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆ; ಸಿದ್ದರಾಮಯ್ಯ

Siddaramaih
Photo Credit :

ಬೆಂಗಳೂರು(ಮಾ.02) : ಮೇಕೆದಾಟು ಯೋಜನೆ ಜಾರಿಗೊಳಿಸಲು ಕೇಂದ್ರ ಮತ್ತು ರಾಜ್ಯದಲ್ಲಿರುವ ಡಬಲ್‌ ಎಂಜಿನ್‌ ಬಿಜೆಪಿ ಸರ್ಕಾರಗಳ ಕೈಯಲ್ಲಿ ಆಗದಿದ್ದರೆ ಹೇಳಲಿ. ಮುಂದಿನ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆಗ ನಾವೇ ಈ ಯೋಜನೆ ಜಾರಿಗೊಳಿಸಿ ತೋರಿಸುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ರಾಜ್ಯದಲ್ಲಿ ನನ್ನ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಗೆ ಸಮಗ್ರ ಯೋಜನಾ ವರದಿ  ಸಿದ್ಧಪಡಿಸಲಾಗಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್‌ ಅವರು ಜನಸಂಪನ್ಮೂಲ ಸಚಿವರಾದಾಗ ಡಿಪಿಆರ್‌ಅನ್ನು ಪರಿಷ್ಕೃತಗೊಳಿಸಲಾಗಿತ್ತು. ಸಮ್ಮಿಶ್ರ ಸರ್ಕಾರವನ್ನು ವಾಮಮಾರ್ಗದಿಂದ ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಮೂರು ವರ್ಷ ಕಳೆದರೂ ಮೇಕೆದಾಟು ಯೋಜನೆಗೆ ಕೇಂದ್ರ ಅರಣ್ಯ ಇಲಾಖೆಯಿಂದ ನಿರಾಕ್ಷೇಪಣ ಪತ್ರ ಪಡೆದಿಲ್ಲ. ಕೇಂದ್ರದಲ್ಲೂ ತಮ್ಮದೇ ಸರ್ಕಾರ ರಾಜ್ಯದಲ್ಲೂ ತಮ್ಮದೇ ಸರ್ಕಾರ ಅಧಿಕಾರದಲ್ಲಿದ್ದರೂ ಬೆಂಗಳೂರಿನ ಜನರಿಗೆ ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರ ಕುಡಿಯುವ ನೀರು ಯೋಜನೆಗೆ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಯೋಜನೆ ಆರಂಭಿಸಲು ಎಳ್ಳಷ್ಟೂ ಪ್ರಯತ್ನ ನಡೆಸದೆ ರಾಜ್ಯದ ಜನರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯವರು ಮಾಡುತ್ತಿರುವ ದ್ರೋಹಕ್ಕೆ ರಾಜ್ಯದ ಜನ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ. ತಮ್ಮ ಕೈಯಲ್ಲಿ ಈ ಯೋಜನೆ ಜಾರಿಗೊಳಿಸಲು ಸಾಧ್ಯವಿಲ್ಲ ಎನ್ನುವುದಾದರೆ ಹೇಳಲಿ, ಮುಂದೆ ನಾವು ಅಧಿಕಾರಕ್ಕೆ ಬಂದಾಗ ಅನುಷ್ಠಾನಗೊಳಿಸುತ್ತೇವೆ ಎಂದು ಸವಾಲು ಹಾಕಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು