ಬೆಂಗಳೂರು: ಮೈತ್ರಿಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸುವುದಕ್ಕಾಗಿಯೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೆಂಬಲ ಸೂಚಿಸಿದೆ ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಗ ನಿಖಿಲ್ ನನ್ನು ಸೋಲಿಸಲು ಯತ್ನಿಸುವ ಮೂಲಕ ನನ್ನನ್ನು ರಾಜಕೀಯವಾಗಿ ಮುಗಿಸಲು ಸಂಚು ನಡೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿಗೆ ಹೇಳಿಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಇದು ಸಂಚಲ್ಲ, ರಾಜಕೀಯ ಎಂದು ತಿರುಗೇಟು ನೀಡಿದರು.
ಮಂಡ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆಯೇ ದಾಣಿಕೆ ಆಗುತ್ತಿಲ್ಲ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಸೋಲಿನ ಭೀತಿಯಿಂದಾಗಿ ಇಡೀ ಕುಟುಂಬ ಮಂಡ್ಯದಲ್ಲಿ ಪ್ರಚಾರವನ್ನು ಮಾಡುತ್ತಿದೆ. ಸೋಲಿನ ಭಯವಿರುವುದರಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಚಾರಕ್ಕೆ ಕರೆಯುತ್ತಿದ್ದಾರೆ ಎಂದು ಲೇವಡಿ ಮಾಡಿದರು.