ಬೆಂಗಳೂರು ನಗರ

ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶವೇ ಇಲ್ಲ; ಬಿ‌.ಸಿ.ನಾಗೇಶ್

ಬೆಂಗಳೂರು : ಶಿಕ್ಷಣ ಬೇಕಾದರೆ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶವೇ ಇಲ್ಲ ಎಂದು ಶಿಕ್ಷಣ ಸಚಿವ ಬಿ‌.ಸಿ.ನಾಗೇಶ್ ಎಚ್ಚರಿಸಿದ್ದಾರೆ.

ಹಿಜಾಬ್​ ವಿವಾದ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ನಾಗೇಶ್​, ಧರ್ಮ ಪಾಲನೆಗೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು. ಆ ರೀತಿ ಬರುವಾಗ ಸಮವಸ್ತ್ರ ಧರಿಸಿಯೇ ಬರಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿನ ನಿಯಮಗಳನ್ನು ಪಾಲಿಸಬೇಕು. ಈ ಸಂಬಂಧ ಹೈಕೋರ್ಟ್‌ ನೀಡುವ ತೀರ್ಪು ಆಧರಿಸಿ ಹೊಸ ನಿಯಮಗಳನ್ನು ಮಾಡುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮವೇ ಮುಂದುವರಿಯುತ್ತದೆ ಎಂದರು.

ದೇಶದ ಸಮಗ್ರತೆ ಹಾಳು ಮಾಡಲು ಪಿತೂರಿ ನಡೆಯುತ್ತಿದೆ. ಹಿಜಾಬ್‌ ವಿವಾದ ಬಳಸಿ ಘರ್ಷಣೆ ಸೃಷ್ಟಿಸುವ ಹುನ್ನಾರವೂ ನಡೆದಿದೆ ಎಂದು ಶಿಕ್ಷಣ ಸಚಿವ ನಾಗೇಶ್​ ಅಸಮಾಧಾನ ಹೊರಹಾಕಿದರು.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಶಿಕ್ಷಣ ಸಚಿವರು, ರಾಜಕೀಯ ಕ್ಷೇತ್ರವನ್ನು ಹಾಳು ಮಾಡಿ ಆಗಿದೆ. ದಯವಿಟ್ಟು ಶಿಕ್ಷಣ ಕ್ಷೇತ್ರವನ್ನೂ ಹಾಳು ಮಾಡಬೇಡಿ. ಬಾಯಿಗೆ ಬಂದಂತೆ ಮಾತನಾಡಲು ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಶಾಲೆ ಸೂಚಿಸಿದ ಯೂನಿಫಾರ್ಮ್ ಧರಿಸುತ್ತೇವೆ ಎಂದು ಮಕ್ಕಳೇ ಬರೆದುಕೊಟ್ಟಿದ್ದಾರೆ. 95 ಮಕ್ಕಳ ಪೈಕಿ 6 ಮಕ್ಕಳು ಮಾತ್ರ ಹಿಜಾಬ್ ಧರಿಸಿದ್ದಾರೆ. ಒಬ್ಬ ಲಾಯರ್ ಆಗಿ ರೂಲ್ ಬುಕ್ ಓದಿ ಸಿದ್ದರಾಮಯ್ಯನವರೇ. ನಾವೆಲ್ಲರೂ ಒಂದೇ ಎನ್ನಲು ಅವಕಾಶ ಮಾಡಿಕೊಡಿ ಎಂದರು.

Gayathri SG

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

5 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

18 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

22 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

37 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

59 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago