ಬೆಂಗಳೂರು ನಗರ

ನೆರೆ ಸಂತ್ರಸ್ತರಿಗೆ ಬೆಳೆಹಾನಿ ಪರಿಹಾರ SDRF ದರಕ್ಕಿಂತ ಹೆಚ್ಚಿನ ದರ ನಿಗದಿ

ಬೆಂಗಳೂರು : ರಾಜ್ಯ ಸರ್ಕಾರವು ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ  ನಿಗದಿಪಡಿಸಿದ್ದ ದರದ ಜೊತೆಗೆ ಹೆಚ್ಚುವರಿ ಪರಿಹಾರ ನೀಡಲು ತೀರ್ಮಾನಿಸಿದೆ. ಈ ಮೂಲಕ ರಾಜ್ಯ ಸರ್ಕಾರ  ಐತಿಹಾಸಿಕ ತೀರ್ಮಾನ ಕೈಗೊಂಡಿದ್ದು, ಇದರಿಂದ ನೆರೆ ಸಂತ್ರಸ್ತರಿಗೆ ಬೆಳೆಹಾನಿ ಪರಿಹಾರ SDRF ದರಕ್ಕಿಂತ ಹೆಚ್ಚಿನ ದರ ಸಿಗಲಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ 2021ನೇ ಜುಲೈನಿಂದ ನವೆಂಬರ್ ವರೆಗೆ ಉಂಟಾದ ಅತಿವೃಷ್ಠಿ ಹಾಗೂ ಪ್ರವಾಹದಿಂದ ಸಂತ್ರಸ್ತರಾದ ವಿವಿಧ ವರ್ಗದ ಜನರ ಹಿತರಕ್ಷಣೆಗೆ ಸರ್ಕಾರವು ಹಲವಾರು ಪರಿಹಾರ ಕ್ರಮಗಳನ್ನು ಕೈಗೊಂಡಿದೆ.

ಬೆಳೆಹಾನಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ನಿಗದಿಪಡಿಸಿದ್ದ ದರದ ಜೊತೆಗೆ ಹೆಚ್ಚುವರಿ ಪರಿಹಾರ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. 2021ನೇ ಜುಲೈ ನಿಂದ ನವೆಂಬರ್ ವರೆಗೆ ಉಂಟಾದ ನೆರೆ ಹಾವಳಿಯಿಂದ 12.52 ಲಕ್ಷ ಹೆಕ್ಟೇರ್ ಬೆಳೆ ಹಾನಿಗೊಂಡ ರೈತರಿಗೆ ಪರಿಹಾರ ದೊರೆಯಲಿದೆ.

ಈವರೆಗೆ ಸುಮಾರು 14.4 ಲಕ್ಷ ರೈತರ ಬ್ಯಾಂಕ್ ಖಾತೆಗೆ ರೂ.926.40 ಕೋಟಿ ಮೊತ್ತವನ್ನು ಜಮೆ ಮಾಡಲಾಗಿದೆ. ಕಳೆದ ಒಂದು ತಿಂಗಳಿನಲ್ಲಿ ಸುಮಾರು 12.90 ಲಕ್ಷ ರೈತರಿಗೆ ರೂ.796 ಕೋಟಿ ಬೆಳೆಹಾನಿ ಪರಿಹಾರ ಪಾವತಿಸಿರೋದಾಗಿ ತಿಳಿಸಿದೆ.

ಇನ್ನೂ ಮನೆಗಳ ಹಾನಿಯ ಪ್ರಮಾಣಕ್ಕೆ ಅನುಗುಣವಾಗಿ ರೂ.50,000 ದಿಂದ 5 ಲಕ್ಷದವರೆಗೆ ಪರಿಹಾರ ನೀಡಲಾಗುತ್ತಿದೆ. ಇದು ಎನ್ ಡಿ ಆರ್ ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ಮಾರ್ಗಸೂಚಿಯ ಪರಿಹಾರಕ್ಕಿಂತ ದುಪ್ಪಟ್ಟಾಗಿದೆ. ಈವರೆಗೆ 23,872 ಮನೆಗಳಿಗೆ ರೂ.171.20 ಕೋಟಿ ಪರಿಹಾರ ಪಾವತಿ ಸಾಲಗಿದೆ ಎಂದು ತಿಳಿಸಿದೆ.

ಇನ್ನೂ ಜಲಾವೃತ ಕುಟುಂಬಗಳಿಗೆ ರಾಜ್ಯದ ಹೆಚ್ಚುವರಿ ಮೊತ್ತ ಸೇರಿ ಒಟ್ಟು 10 ಸಾವಿರದಂತೆ ತುರ್ತು ಪರಿಹಾರ ಪಾವತಿ ಹಣ ನೀಡಲಾಗಿದೆ. ಇದಕ್ಕಾಗಿ ಈವರೆಗೆ 85,860 ಕುಟುಂಬಗಳಿಗೆ ಈ ಪರಿಹಾರ ಪಾವತಿಸಲಾಗಿದೆ. ಪ್ರವಾಹದಿಂದ ಬಾಧಿತರಾದ ಸಂತ್ರಸ್ತರ ನೆರವಿಗಾಗಿ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲು ಸರ್ಕಾರದಿಂದ 3,326.86 ಕೋಟಿ ವೆಚ್ಚವಾಗಲಿದೆ ಎಂದು ಮಾಹಿತಿ ನೀಡಿದೆ.

ಅಂದಹಾಗೇ ಮಳೆಯಾಶ್ರಿತ ಬೆಳೆ ಪರಿಹಾರಕ್ಕಾಗಿ ಎಸ್ ಡಿ ಆರ್ ಎಪ್ ಮಾರ್ಗಸೂಚಿದರ 6,800 ಇದ್ದದ್ದನ್ನು ರಾಜ್ಯ ಸರ್ಕಾರ 6,800 ಹೆಚ್ಚುವರಿಗೊಳಿಸಿ ಪರಿಷ್ಕೃತ ದರದಲ್ಲಿ ರೂ.13,600 ನಿಗದಿ ಪಡಿಸಲಾಗಿದೆ.

ನೀರಾವರಿ ಬೆಳೆ ಪರಿಹಾರಕ್ಕೆ ರೂ.13,500 ಎಸ್ ಡಿ ಆರ್ ಎಫ್ ಮಾರ್ಗಸೂಚಿ ದರವನ್ನ ರಾಜ್ಯ ಸರ್ಕಾರದ ದುಪ್ಪಟ್ಟುಗೊಳಿಸಿ ರೂ.25,500 ನಿಗದಿ ಪಡಿಸಿದೆ. ತೋಟಗಾರಿಕೆ ಬೆಳೆಹಾನಿ ಪರಿಹಾರಕ್ಕೆ 18,000 ಇದ್ದಂತ ಪರಿಹಾರಕ್ಕೆ ರೂ.10 ಸಾವಿರ ಸೇರಿಸಿ 28 ಸಾವಿರಕ್ಕೆ ಪರಿಷ್ಕರಿಸಲಾಗಿದೆ.

Gayathri SG

Recent Posts

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

13 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

38 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

1 hour ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

3 hours ago