News Karnataka Kannada
Friday, May 03 2024
ಬೆಂಗಳೂರು ನಗರ

ನೈತಿಕ ಪೊಲೀಸ್ ಗಿರಿ ಸಮರ್ಥನೆ, ಸಿಎಂ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Congress,
Photo Credit :
ಬೆಂಗಳೂರು: ಅನೈತಿಕ ಪೊಲೀಸ್‌ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಕುರಿತು ಗುರುವಾರ ಟ್ವೀಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌ ಪಕ್ಷವು, ‘ಬಿಜೆಪಿಯ ಆಡಳಿತಕ್ಕೆ ಸಾಮಾಜಿಕ ಭಾವನೆಗಳೇ ಆಧಾರ ಎಂದಾದರೆ ದೇವದಾಸಿ ಪದ್ಧತಿ, ಅಸ್ಪೃಶ್ಯತೆಯ ಆಚರಣೆ, ಬೆತ್ತಲೆ ಸೇವೆಯಂತಹ ಸಾಮಾಜಿಕ ಆಚರಣೆಗಳ ಹಿಂದಿದ್ದ ‘ಭಾವನೆ’ಗಳನ್ನು ಪುರಸ್ಕರಿಸಲಾಗುತ್ತದೆಯೇ?’ ಎಂದು ಪ್ರಶ್ನಿಸಿದೆ.

‘ಅನೈತಿಕ ಪೊಲೀಸ್‌ಗಿರಿ ಹೆಸರಲ್ಲಿ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳಿಗೆ ಸಂಬಂಧಿಸಿ ಬೊಮ್ಮಾಯಿ ಅವರ ಕುಮ್ಮಕ್ಕಿನ ಹೇಳಿಕೆಯಿಂದ ಸಮಾಜಘಾತುಕ ಶಕ್ತಿಗಳಿಗೆ ಬಲ ಬಂದಿದೆ’ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

‘ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸಗಳು ಈ ಸರ್ಕಾರದಿಂದ ಸಾಧ್ಯವಿಲ್ಲ ಎಂದು ನಿಶ್ಚಿತವಾಯ್ತು’ ಎಂದು ಕೆಪಿಸಿಸಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು