ಪಕ್ಷ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿ.ಟಿ.ರವಿ

ಬೆಂಗಳೂರು: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೊ ಅದರಂತೆ ನಡೆದುಕೊಳ್ಳುತ್ತೇನೆ. ರಾಜೀನಾಮೆಗೆ ಸೂಚಿಸಿದರೆ ತಕ್ಷಣವೇ ಸಚಿವ ಸ್ಥಾನ ಬಿಡುತ್ತೇನೆ ಸಚಿವ ಸಿ.ಟಿ. ರವಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಬ್ಬರಿಗೆ ಒಂದೇ ಹುದ್ದೆ ಎಂಬ ಸೂತ್ರದಂತೆ ಪಕ್ಷ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ.ಟಿ. ರವಿ ಪ್ರತಿಕ್ರಿಯಿಸಿದರು.

ಚುನಾವಣೆಗೆ ಸ್ಪರ್ಧಿಸಲು ಪಕ್ಷದ ವರಿಷ್ಠರು ಸೂಚಿಸಿದಾಗ ಮರು ಮಾತನಾಡದೆ ಸ್ಪರ್ಧಿಸಿ, ಗೆದ್ದು ಬಂದಿದ್ದೇನೆ. ಎಂದಿಗೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲಿಲ್ಲ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವಂತೆಯೂ ಕೇಳಿರಲಿಲ್ಲ. ವರಿಷ್ಠರು ನನ್ನ ಮೇಲೆ ನಂಬಿಕೆ ಇರಿಸಿ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನನ್ನ ಮುಂದಿನ ಗುರಿ ಎಂದು ಹೇಳಿದರು.

ವರಿಷ್ಠರು ಸೂಚಿಸಿದ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ. ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ. ರಾಷ್ಟ್ರ ರಾಜಕಾರಣಕ್ಕೆ ಹೋದರೂ ಕರ್ನಾಟಕವೇ ನನ್ನ ರಾಜಕೀಯ ಕರ್ಮಭೂಮಿ ಎಂದು ಹೇಳಿದರು.

Desk

Recent Posts

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

5 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

5 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

6 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

6 hours ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

7 hours ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

7 hours ago