News Karnataka Kannada
Wednesday, May 01 2024
ಬೆಂಗಳೂರು ನಗರ

ಪದವಿ ಪರೀಕ್ಷೆ ಒಂದು ತಿಂಗಳು ಮುಂದೂಡಲು ವಿವಿಗಳಿಗೆ ಸೂಚನೆ

Exam
Photo Credit : News Kannada

ಬೆಂಗಳೂರು: ಕೊರೊನಾ ಸೋಂಕು ಮತ್ತು ಓಮಿಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡುವಂತೆ ಆದೇಶಿಸಲಾಗಿದೆ.

ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿಶ್ವವಿದ್ಯಾಲಯಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ಬಳಿಕ ಇದೀಗ ರಾಜ್ಯದಲ್ಲಿ ಹಿಜಾಬ್ ವಿವಾದ ವಿದ್ಯಾರ್ಥಿಗಳನ್ನು ಕಾಡುತ್ತಿದ್ದು, ಕರ್ನಾಟಕ ರಾಜ್ಯಾದ್ಯಂತ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆ ಬಳಿಕ, ಇದೀಗ ಕಾಲೇಜು ಮತ್ತೆ ಆರಂಭವಾಗಿದೆ. ಆದರೂ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಮತ್ತೆ ಮೊದಲಿನಂತೆ ಆರಂಭವಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು