ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ನೀಡಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ನೀಡಲ್ಲ.ಎಲ್ಲರೂ ಕೋರ್ಟ್ ಆದೇಶ ಪಾಲನೆ ಮಾಡಬೇಕು.
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಕೋರ್ಟ್ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.