ಬೆಂಗಳೂರು: ಬೆಳಗಾವಿಯಲ್ಲಿ ಪುಂಡಾಟಿಕೆ ಪ್ರದರ್ಶನ ಮಾಡುತ್ತಿರುವರನ್ನು ಬಂಧಿಸಿ ಜೈಲಿಗೆ ಕಳುಹಿಸಿ, ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದವನ್ನು ಮಂಡಿಸಬೇಡಿ ಎಂದು ಮುಖ್ಯಮಂತ್ರಿ ಅವರಿಗೆ ಸಲಹೆ ನೀಡಿರುವ ಸಿದ್ದರಾಮಯ್ಯ ಅವರು, ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ ಒತ್ತಾಯಿಸಿದ್ದಾರೆ.
ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ.
ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ ಆದೇಶ ನೀಡಿ ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ, ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು ಮನವಿ ಮಾಡಿದ್ದಾರೆ