ಬೆಂಗಳೂರು: ಟಾಲಿವುಡ್ ನಟ ಅಲ್ಲು ಅರ್ಜುನ್ ನಟ ಪುನೀತ್ ರಾಜಕುಮಾರ್ ನಿವಾಸಕ್ಕೆ ಇಂದು ಭೇಟಿ ನೀಡಲಿದ್ದಾರೆ.ಬೆಂಗಳೂರಿನ ಸದಾಶಿವನಗರದಲ್ಲಿರುವ ಅಪ್ಪು ನಿವಾಸಕ್ಕೆ ಭೇಟಿ ನೀಡಿ ಪುನೀತ್ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.
ಮೊದಲಿಗೆ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಲಿರುವ ಅಲ್ಲು ಅರ್ಜುನ್ ಬಳಿಕ ಪುನೀತ್ ಮನೆಗೆ ತೆರಳಲಿದ್ದಾರೆ. ನಂತರ ಕಂಠೀರವ ಸ್ಟುಡಿಯೋದಲ್ಲಿರುವ ನಟ ಪುನೀತ್ ಸಮಾಧಿಗೆ ತೆರಳಿ ನಮನ ಸಲ್ಲಿಸಲಿದ್ದಾರೆ.