News Karnataka Kannada
Tuesday, April 30 2024
ಸಾಂಡಲ್ ವುಡ್

ಪುನೀತ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ರಾಹುಲ್ ಗಾಂಧಿ

Ashwini Punith
Photo Credit : Twitter

ಬೆಂಗಳೂರು : ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ ನೀಡಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಪುತ್ರಿ ವಂದಿತಾ ಪುನೀತ್ ರಾಜಕುಮಾರ್ ಅವರಿಗೆ ಸಾಂತ್ವನ ಹೇಳಿದರು.

ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು ಅವರ ಪತ್ನಿ ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ.

ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ.

ಅಪ್ಪು ಮನೆ ಭೇಟಿ ನೀಡಿ ಸಾಂತ್ವಾನ ಹೇಳಿದ ಬಳಿಕ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್  ಅವರ ನಿವಾಸದಲ್ಲಿ ಇಂದು ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ.ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ” ಎಂದು ರಾಹುಲ್ ಗಾಂಧಿ ಸ್ಮರಿಸಿದ್ದಾರೆ.

ರಾಹುಲ್ ಗಾಂಧಿ ಭೇಟಿ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ನಟ ರಾಘವೇಂದ್ರ ರಾಜಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು