ಬೆಂಗಳೂರು : ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕು ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆಯುತ್ತೇನೆ ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.
ಇಂದು ವಿಶ್ವದಾದ್ಯಂತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ರಿಲೀಸ್ ಆಗಿದ್ದು, ಜೇಮ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತೇನೆ.