ಬೆಂಗಳೂರು : ರಾಜ್ಯದಲ್ಲಿನ ಎಲ್ಲಾ ಖಾಸಗಿ ಖಾಲೆಗಳಲ್ಲಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ತರಗತಿಗಳಿಗೆ ಕನ್ನಡವನ್ನು ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ 2020 ( ಎನ್ ಇಪಿ) ಕುರಿತ ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಕನ್ನಡ ಕಡ್ಡಾಯಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಷ್ಟ್ರೀಯ ಶಿಕ್ಷಣ ನೀತಿ ಭಾಗವಾಗಿ ಪದವಿ ಕೋರ್ಸ್ಗಳಲ್ಲಿ ಕನ್ನಡ ಕಡ್ಡಾಯ ಅಳವಡಿಸುವ ಸರ್ಕಾರದ ಆದೇಶಕ್ಕೆ ತಿಂಗಳ ಹಿಂದಷ್ಟೇ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತ್ತು.
ಎನ್ಇಪಿಯನ್ನು ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಹಂತ ಹಂತವಾಗಿ ಜಾರಿಗೊಳಿಸಲಾಗುವುದು, ಅದರ ಅನುಷ್ಠಾನದ ಕುರಿತು ಚರ್ಚಿಸಲು ಅನೇಕ ಸಭೆಗಳು ನಡೆಯುತ್ತಿವೆ ಎಂದು ಸಚಿವರು ತಿಳಿಸಿದರು