ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿರುವ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಪ್ರಶಾಂರ್ ಸಂಬರಗಿ ಕೋಮುಭಾವನೆ ಕೆರಳಿಸುವ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದ್ದು, ವಕೀಲ ಸಿ. ಲಕ್ಷ್ಮೀ ನಾರಾಯಣ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.