ಬೆಂಗಳೂರು ನಗರ

ಪ್ರತಿಯೊಬ್ಬರು ಕಡ್ಡಾಯವಾಗಿ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬೇಕು: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಪದವಿ, ಪದವಿಪೂರ್ವ ಕಾಲೇಜುಗಳು ಪ್ರಾರಂಭವಾಗುತ್ತಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬೇಕೆಂದು ಪೋಷಕರು ಹಾಗೂ ಮಕ್ಕಳಿಗೆ  ಇದು ನನ್ನ ಕಳಕಳಿಯ ಮನವಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರು ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಲೇಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕಾಲೇಜುಗಳನ್ನು ಪುನರಾರಂಭಿಸಲಾಗಿದೆ ಇದಕ್ಕೆ ಎಲ್ಲರೂ ಸಹಕರಿಸಬೇಕೆಂದು ಹೇಳಿದರು.

ನ್ಯಾಯಾಲಯದ ಆದೇಶವನ್ನು ನಾವು ಪಾಲನೆ ಮಾಡಬೇಕು. ಕೋರ್ಟ್‍ನ ಮಧ್ಯಂತರ ಆದೇಶ ಪಾಲಿಸಿ ಅಂತಿಮ ತೀರ್ಪಿನವರೆಗೂ ಸಂಯಮದಿಂದ ಕಾಯಬೇಕು. ಎಂದರು. ಶಾಲೆ, ಕಾಲೇಜುಗಳ ಆಡಳಿತ ಮಂಡಳಿ, ಪೋಷಕರು ಪರಸ್ಪರ ಗೊಂದಲ ಬಗೆಹರಿಸಿಕೊಂಡು ಸೌಹಾರ್ದಯುತ ವಾತಾವರಣ ನಿರ್ಮಿಸಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಆ ಮೂಲಕ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

Swathi MG

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

12 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

41 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

58 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago