ಬೆಂಗಳೂರು ನಗರ

ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ಒಂದು ಮಾದರಿ ಶಾಲೆ ನಿರ್ಮಾಣ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಪ್ರತಿ ಗ್ರಾಮಪಂಚಾಯ್ತಿಗಳಿಗೆ ತಲಾ ಒಂದೊಂದು ಮಾದರಿ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಹಣಕಾಸಿನ ಲಭ್ಯತೆಯ ನಂತರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದರು.

ಪ್ರತಿ ಗ್ರಾಮಪಂಚಾಯ್ತಿಗಳಿಗೆ ಒಂದೊಂದು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಬೇಕು ಎಂದು ಶಾಸಕರು ಬೇಡಿಕೆ ಇಟ್ಟಿದ್ದಾರೆ. ನಮಗೆ ಹೊಸ ಕಟ್ಟಡಗಳು, ಸಿಬ್ಬಂದಿ, ಮೂಲಭೂತ ಸೌಕರ್ಯ ಸೇರಿದಂತೆ ಹಲವು ರೀತಿಯ ಸೌಲಭ್ಯ ಬೇಕು.

ಶಾಸಕ ಶಿವಲಿಂಗೇಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, 2019-20ರಲ್ಲಿ 276 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 2022-23ನೇ ಸಾಲಿನ ಆಯವ್ಯಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಮಟ್ಟವನ್ನು ಉತ್ತಮಪಡಿಸಲು ಹೋಬಳಿ ಮಟ್ಟದಲ್ಲಿ ಮೂಲಸೌಕರ್ಯ ಇರುವ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಉನ್ನತೀಕರಿಸಲು ಘೋಷಣೆ ಮಾಡಲಾಗಿದೆ ಎಂದರು.

ಅನುದಾನದ ಲಭ್ಯತೆ ನೋಡಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಬೋಧನೆ ಮಾಡಲು ಇಂಗ್ಲಿಷ್ ಶಿಕ್ಷಕರ ಅಗತ್ಯವಿದೆ. ನೇಮಕಾತಿ ಮಾಡಿಕೊಳ್ಳಲು ಸಭೆ ಬೇಕಾಗುತ್ತದೆ ಎಂದು ಹೇಳಿದರು.

Swathi MG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago