ಬೆಂಗಳೂರು: ಸೊಮವಾರದಂದು ಚಿತ್ರದುರ್ಗಾ ಹಾಗೂ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ರ್ಯಾಲಿಯನ್ನು ಏಪ್ರಿಲ್ 9(ಮಂಗಳವಾರ)ಕ್ಕೆ ಮುಂದೂಡಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಆರ್. ಅಶೋಕ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸೋಮವಾರ ನವದೆಹಲಿಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆಯಾದುದರಿಂದ ಚಿತ್ರದುರ್ಗಾ ಹಾಗೂ ಮೈಸೂರು ರ್ಯಾಲಿಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.
ಏ.13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಹಾಗೂ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇದರ ಜತೆಗೆ ಶಿವಮೊಗ್ಗ ಜಿಲ್ಲೆಗೂ ತೆರಳುವ ಸಾಧ್ಯತೆಯಿದೆ.
ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್, ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಆಗಮಿಸಲಿದ್ದಾರೆ ಎಂದರು.