News Karnataka Kannada
Sunday, May 05 2024
ಬೆಂಗಳೂರು ನಗರ

ಪ್ರೀತಿ ಒಪ್ಪದ ಯುವತಿಗೆ ಚಾಕುವಿನಿಂದ ಇರಿದ ಯುವಕ

Murder
Photo Credit :

ಬೆಂಗಳೂರು: ತನ್ನ ಪ್ರೇಮ ನಿವೇದನೆಯನ್ನು ನಿರಾಕರಿಸಿದ ಯುವತಿಯನ್ನು ಪ್ರೇಮಿಯೊಬ್ಬ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಿರುವ ಘಟನೆ ಬಾಗಲಗುಂಟೆಯ ಮಂಜುನಾಥ್ ನಗರದಲ್ಲಿ ನಡೆದಿದೆ.
ಯುವತಿಯನ್ನು ಪ್ರೀತಿಸುತಿದ್ದ ಉದಯ್ ಎಂಬಾತ, ಇಂದು ಯುವತಿ ಕಾಲೇಜಿಗೆ ಹೋಗುವಾಗ ಅಡ್ಡಗಟ್ಟಿದ್ದಾನೆ. ಈ ವೇಳೆ ತಾನು ತಂದಿದ್ದ ಚಾಕುವಿನಿಂದ ಯುವತಿ ಕುತ್ತಿಗೆ ಹಾಗೂ ತೊಡೆ ಭಾಗಕ್ಕೆ ಬಲವಾಗಿ ಇರಿದಿದ್ದಾನೆ. ಯುವತಿ ಕೊಲೆಗೆ ಯತ್ನಿಸಿ, ನಂತರ ತಾನೂ ಗೋಡೆಗೆ ತಲೆ ಚಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದಾನೆ.
ಪಾಗಲ್ ಪ್ರೇಮಿ ಉದಯ್ ಮತ್ತು ಯುವತಿ ರಾಜಾಜಿನಗರದ ಒಂದೇ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಬಳಿಕ ಪ್ರತ್ಯೇಕ ಖಾಸಗಿ ಕಾಲೇಜಿನಲ್ಲಿ ಡಿಗ್ರಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕಳೆದ ಮೂರು ವರ್ಷದಿಂದ ಯುವತಿ ಜೊತೆ ಫ್ರೆಂಡ್ ಶಿಪ್ ಹೊಂದಿದ್ದ ಉದಯ್‌, ಇತ್ತೀಚೆಗೆ ಲವ್ ಪ್ರಪೋಸ್ ಮಾಡಿದ್ದ ಎನ್ನಲಾಗಿದೆ. ಆದರೆ ಯುವತಿ ಪಾಗಲ್ ಪ್ರೇಮಿಯ ಪ್ರೀತಿಯನ್ನು ನಿರಾಕರಿಸಿದ್ದಳು.ಈ ಹಿನ್ನೆಲೆ ಕಾಲೇಜಿಗೆ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿದ್ದ ಉದಯ್, ಮಾರಣಾಂತಿಕ‌ ಹಲ್ಲೆ ನಡೆಸಿ ಉದಯ್ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು