ಬೆಂಗಳೂರು: ಫೇಸ್ಬುಕ್ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ದಂಪತಿಗಳ ಸಾವಿನಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಸೌಮ್ಯಾ(23), ಅನೂಪ್(34) ಎಂದು ಗುರುತಿಸಲಾಗಿದೆ.
ಹಾಸನ ಮೂಲದವರಾದ ದಂಪತಿ ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ 8ನೇ ಮೈಲಿಯಲ್ಲಿ ವಾಸವಾಗಿದ್ದರು. ಫೇಸ್ಬುಕ್ ವಿಚಾರ ಸಂಬಂಧಿಸಿದಂತೆ ಇವರಿಬ್ಬರ ನಡುವೆ ಜಗಳ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಆ ಬಳಿಕ ಇಬ್ಬರು ಪ್ರತ್ಯೇಕ ಕೋಣೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಈ ಪ್ರಕರಣ ಬಾಗಲಗುಂಟೆ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ತನಿಖೆ ನಡೆಯಬೇಕಾಗಿದೆ.