News Karnataka Kannada
Sunday, April 28 2024
ಬೆಂಗಳೂರು ನಗರ

ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು- ಪ್ರತಾಪ್ ಸಿಂಹ

Prathap Simha
Photo Credit :

ಬೆಂಗಳೂರು, (ಫೆ.21) : ಶಿವಮೊಗ್ಗದಲ್ಲಿ ಭಾನುವಾರ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ಸಂಸದ ಪ್ರತಾಪ್ ಸಿಂಹ ತೀವ್ರವಾಗಿ ಖಂಡಿಸಿದ್ದಾರೆ.

ಇಂದು (ಸೋಮವಾರ) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಅವರು, ಬೀದಿಯಲ್ಲಿ ಹರ್ಷ ಅವರ ಕಗ್ಗೊಲೆಯಾಗಿದ್ದು ಅತೀವ ನೋವಾಗಿದೆ ಮತ್ತು ನಮ್ಮ ಸರ್ಕಾರವೇ ಅಧಿಕಾರದಲ್ಲಿರುವ ಸಮಯದಲ್ಲಿ ಕೊಲೆ ನಡೆದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಅಸಮಾಧಾನ ಹೊರಹಾಕಿದರು.

ಹಿಂದೆ ಮಂಗಳೂರಿನಲ್ಲಿ ಗೋಲಿಬಾರ್ ಮತ್ತು ಕೆ ಜಿ ಹಳ್ಳಿಯಲ್ಲಿ ಗಲಭೆ ನಡೆದಾಗ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಂಡಿದ್ದರೆ ಹರ್ಷ ಅವರ ಕೊಲೆ ನಡೆಯುತ್ತಿರಲಿಲ್ಲ. ಈಗಲಾದರೂ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಲಿ ಆಗ್ರಹಿಸಿದರು.

ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಹೇಳಿದರೆ ಮತ್ತು ನಾಲ್ಕು ಜನರನ್ನು ಬಂಧಿಸಿ ಜೈಲಿಗೆ ಹಾಕಿದರೆ ಸಾಲದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು, ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಸ್ಥೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

‘ಹೈದರಾಬಾದ್‌ನಲ್ಲಿ ಅತ್ಯಾಚಾರಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು, ಇಲ್ಲೂ ಅದೇ ರೀತಿ ಕ್ರಮಗಳನ್ನು ಕೈಗೊಂಡರೆ ಪಾಠ ಕಲಿಯುತ್ತಾರೆ. ಕೆ ಜಿ ಹಳ್ಳಿ ಗಲಭೆ ನಡೆದಾಗ ವೇಳೆ ಬೊಮ್ಮಾಯಿ ಗೃಹ ಸಚಿವರಾಗಿದ್ದರು, ಆ ಸಂದರ್ಭದಲ್ಲೇ ಅವರು ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಸಂಸ್ಥೆಗಳ ಮೇಲೆ ನಿಷೇಧ ಹೇರಿದ್ದರೆ, ಹರ್ಷ ಅವರ ಕೊಲೆ ನಡೆಯುತ್ತಿರಲಿಲ್ಲ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು