News Karnataka Kannada
Sunday, May 05 2024
ಬೆಂಗಳೂರು ನಗರ

ಬಡವರ ಮನೆ ಎದರು ಒಳ್ಳೆ ರಸ್ತೆ ನಿರ್ಮಾಣವಾಗಬೇಕು : ಹೈಕೋರ್ಟ್

High Court
Photo Credit :
ಬೆಂಗಳೂರು : ನಗರದ ರಸ್ತೆ ಗುಂಡಿ‌ ಮುಚ್ಚುವ ವಿಚಾರವಾಗಿ ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಗುಣಮಟ್ಟದ ಕಾಮಗಾರಿ ನಡೆಸಲು ಹೈಕೋರ್ಟ್ ತಾಕೀತು ಮಾಡಿದೆ. ಮುಚ್ಚಿದ ಗುಂಡಿಗಳು 2- 3 ತಿಂಗಳಲ್ಲಿ ಮತ್ತೆ ಗುಂಡಿ ಬೀಳುತ್ತಿವೆ. ಪದೇಪದೆ ಗುಂಡಿಯಾಗದಂತೆ ಕಾಮಗಾರಿ ನಡೆಸಿ. ಕೇವಲ ಸಚಿವರ ಮನೆ ಬಳಿ ರಸ್ತೆ ಉತ್ತಮಗೊಂಡರೆ ಸಾಲದು. ಬಡವರ ಮನೆ ಬಳಿಯ ರಸ್ತೆಯೂ ಸರಿಯಾಗಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಗುಣಮಟ್ಟದ ಕಾಮಗಾರಿ ನಡೆಸಲು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳ ಬಗ್ಗೆ ವರದಿ ತಯಾರಿಸಲು ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ರಸ್ತೆ ಗುಣಮಟ್ಟದ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಕಳಪೆ ಕಾಮಗಾರಿಯಿಂದ ಗುಂಡಿಗಳು ಬಿದ್ದಿದ್ದರೆ ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಬೊಮ್ಮಾಯಿ ಅಕ್ಟೋಬರ್ 6ರಂದು ಮೈಸೂರಿನಲ್ಲಿ ಎಚ್ಚರಿಸಿದ್ದರು.

ಯಾವ ಅವಧಿಯಲ್ಲಿ ರಸ್ತೆ ಆಗಿದೆ? ರಸ್ತೆಗಳನ್ನು ನಿರ್ಮಿಸುವಾಗ ಗುಣಮಟ್ಟ ಕಾಪಾಡಲಾಗಿದೆಯೇ ಎಂಬ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ‌. ಕಳಪೆ ಕಾಮಗಾರಿಯಿಂದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರೆ ಗುತ್ತಿಗೆದಾರನ ಮೇಲೆ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಹೇಳಿದ್ದರು. ಮಳೆ ಬಂದಾಗ ಮಾತ್ರ ಈ ವಿಚಾರ ಚರ್ಚೆ ಮಾಡಿ ನಂತರ ಸುಮ್ಮನಾಗುವುದಿಲ್ಲ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಳೆ ಬಂದಾಗ ನಿರಂತರ ನೀರು ತುಂಬುವ ಪ್ರದೇಶ ಗುರುತು ಮಾಡಲಾಗಿದೆ. ಅದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲಾಗುತ್ತದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು