ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರು ಗುರುವಾರ ಬೆಳಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅರ್ಧ ಗಂಟೆ ಕಾಲ ಮಾತುಕತೆ ನಡೆಸಿದರು.
ಇಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಅವರನ್ನು ಜೆಡಿಎಸ್ ಸೇರಲು ಮನವೊಲಿಸಲು ಕೂಡ ಬಂದಿಲ್ಲ. ಹಳೆಯ ಸ್ನೇಹ ಮತ್ತು ಈಗಲೂ ಅದು ಇದೆ ಎಂದು ಭೇಟಿ ಬಳಿಕ ಕುಮಾರಸ್ವಾಮಿ ತಿಳಿಸಿದರು.
ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಉದ್ಧಟತನದ ಬಗ್ಗೆ ತಾನು ಗೃಹ ಸಚಿವರೊಂದಿಗೆ ಮಾತನಾಡಿದ್ದೇನೆ. ಇದರ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.