News Karnataka Kannada
Thursday, May 09 2024
ಬೆಂಗಳೂರು ನಗರ

ಬಾಲ ಮಂದಿರದಲ್ಲಿ ಊಟ ಸೇವಿಸಿದ 193 ಮಕ್ಕಳು ಅಸ್ವಸ್ಥ

Photo Credit :

ಬಾಲ ಮಂದಿರದಲ್ಲಿ ಊಟ ಸೇವಿಸಿದ 193 ಮಕ್ಕಳು ಅಸ್ವಸ್ಥ

ಬೆಂಗಳೂರು: ಸರ್ಕಾರಿ ಬಾಲಕರ ಬಾಲ ಮಂದಿರದಲ್ಲಿ ರಾತ್ರಿ ಊಟ ಸೇವಿಸಿದ 103 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರಿನ ಸಿದ್ಧಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭಾನುವಾರ ರಾತ್ರಿ ಕೂಡ ಮಕ್ಕಳು ಎಂದಿನಂತೆ ಊಟ ಮಾಡಿದ್ದರು. ಆದರೆ 193 ಮಕ್ಕಳು ಊಟದ ಬಳಿಕ ವಾಂತಿ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

ಮಕ್ಕಳು ರಾತ್ರಿ ಅನ್ನ, ಸಾರು ಪಲ್ಯ ಸೇವಿಸಿದ್ದರು. ಇದರ ಬಳಿಕ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಹಾರ ವಿಷವಾಗಿರುವುದು ಇದಕ್ಕೆ ಕಾರಣವಾಗಿರಬಹುದು ಎಂದು ಆಸ್ಪತ್ರೆಗೆ ಭೇಟಿ ನೀಡಿದ ಬೆಂಗಳೂರು ಜಿಲ್ಲಾಧಿಕಾರಿ ವಿಜಯ್ ಶಂಕರ್ ತಿಳಿಸಿದ್ದಾರೆ.

ಆಹಾರವನ್ನು ಈಗಾಗಲೇ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಡುಗೆ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು