News Karnataka Kannada
Saturday, May 04 2024
ಬೆಂಗಳೂರು ನಗರ

ಬಿಎಂಟಿಸಿ ಬಸ್‌, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವುದಕ್ಕೆ ಅವಕಾಶವಿಲ್ಲ; ಆರ್ ಅಶೋಕ್

R Ashok
Photo Credit :

ಬೆಂಗಳೂರು, ಜ. 4 : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಬಸ್‌ಗಳಲ್ಲಿ ಆಸನಗಳನ್ನು ಮೀರಿ ಪ್ರಯಾಣಿಕರು ಪ್ರಯಾಣಿಸುವುದಕ್ಕೆ ಯಾವುದೇ ಅನುಮತಿಯಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಿಎಂಟಿಸಿ ಬಸ್‌ಗಳಲ್ಲಿ ನಿಂತು ಪ್ರಯಾಣಿಸುವುದಕ್ಕೆ ಇನ್ನು ಮುಂದೆ ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸಹಿತ ಹಲವು ಅಧಿಕಾರಿಗಳು ಭಾಗವಹಿಸಿದ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳನ್ನು ಕಂದಾಯ ಸಚಿವ ಆರ್ ಅಶೋಕ್ ಹಾಗೂ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಕಾರ, ಬಿಎಂಟಿಸಿ ಬಸ್‌ಗಳಲ್ಲಿ ಎಷ್ಟು ಆಸನಗಳಿವೆಯೋ ಅಷ್ಟೇ ಜನರ ಪ್ರಯಾಣಕ್ಕೆ ಮಾತ್ರ ಅವಕಾಶವನ್ನು ನೀಡಬೇಕು.

ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ:

ಸಿಲಿಕಾನ್ ಸಿಟಿಯಲ್ಲಿ ಜನರ ಸಂಚಾರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಮೆಟ್ರೊ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ನಿಂತು ಪ್ರಯಾಣಿಸಲು ಅನುಮತಿ ಇರುವುದಿಲ್ಲ. ಈ ಕುರಿತು ಮೆಟ್ರೊ ನಿಗಮದಿಂದ ಅಧಿಕೃತ ಮಾಹಿತಿ ಪ್ರಕಟವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು