ಬೆಂಗಳೂರು: ಬಿಎಂಟಿಸಿ ಬಸ್ ಹತ್ತುವಾಗ ಕಾಲು ಜಾರಿ ಬಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೆಜೆಸ್ಟಿಕ್ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕೃಷ್ಣಮೂರ್ತಿ (45) ಎಂಬುವವರೇ ಮೃತ ದುರ್ದೈವಿ.
ಬಸ್ ಹತ್ತುವಾಗ ಕಾಲು ಜಾರಿ ಬಸ್ ಚಕ್ರಕ್ಕೆ ಸಿಲುಕಿ ಸಾವು ಸಂಭವಿಸಿದೆ. ಉಪ್ಪಾರಪೇಟೆ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.