ಬಿಜೆಪಿಯ ಇನ್ನು 4 ವಿಕೆಟ್ ಬೀಳುತ್ತೆ: ಪ್ರಿಯಾಂಕ ಖರ್ಗೆ

ಬೆಂಗಳೂರು : ನಮ್ಮ ಉದ್ದೇಶ ಕೇವಲ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಪಡೆಯುವುದು ಮಾತ್ರ ಇಲ್ಲ. ಈ 40 ಪರ್ಸಂಟೇಜ್ ಎಲ್ಲ ಇಲಾಖೆಯಲ್ಲೂ ಇದೆ. ಇದನ್ನು ಕಿತ್ತೊಗೆಯಬೇಕು ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.

ನಗರದ ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಸ್ಸಿ ಎಸ್ಟಿ ಗಂಗಾ ಕಲ್ಯಾಣ ಯೋಜನೆಯಲ್ಲಿ 14537 ಬೋರ್ ವೆಲ್ ಮಂಜೂರಾಗಿದ್ದು, ಇದರಲ್ಲಿ ಅವ್ಯವಹಾರ ಆಗಿದೆ.

ಆರ್ ಡಿ ಪಿಆರ್ ಇಲಾಖೆಯ ಇಂಜನಿಯರ್ ಗೆ ತನಿಖೆಗೆ ಕೊಟ್ಟಿದ್ರು, ವರದಿ 15 ದಿನದಲ್ಲಿ ಬರಬೇಕಿತ್ತು. ದೇವರಾಜ ಅರಸು ಹಿಂದುಳಿದ ವರ್ಗದ ಯೋಜನೆಯಲ್ಲಿ ಬೋರ್ ವೆಲ್ ಕೊರೆಯಲು 93 ಸಾವಿರ ನಿಗದಿ ಮಾಡ್ತಾರೆ, ಆದರೆ ಎಸ್ಸಿ ಎಸ್ಟಿಯಲ್ಲಿ 1ಲಕ್ಷ 18 ಸಾವಿರ ನಿಗದಿ ಮಾಡ್ತಾರೆ. ನಾನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಮಾಣಿಕರು ಎಂದು ತಿಳಿದಿದ್ದೆ, ಆದರೆ ಅವರ ಆದೇಶ ನೋಡಿದ್ರೆ ನನಗೆ ಅನುಮಾನ ಬರ್ತಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವರಿಗೂ 40 ಪರ್ಸಂಟೇಜ್ ಕಿಕ್ ಬ್ಯಾಕ್ ಹೋಗಿದೆ. ಹಿಂದಿನ ಸಚಿವರು, ಈಗಿನ ಸಚಿವರು ಇಬ್ಬರು ಇದರ ಹಿಂದೆ ಇದ್ದಾರೆ. ಈ ಬಗ್ಗೆ ಸರಿಯಾಗಿ ತನಿಖೆ ನಡೆದ್ರೆ ಇನ್ನು ಎರಡು ವಿಕೇಟ್ ಬೀಳುತ್ತೆ ಎಂದು ಹೇಳಿದರು.

545 ಪಿಎಸ್‌ಐ ಹುದ್ದೆಗೆ ಪರೀಕ್ಷೆಯಲ್ಲೂ ಅವ್ಯವಹಾರ ಆಗಿದೆ. ಈ ಬಗ್ಗೆ ಅಭ್ಯರ್ಥಿಗಳೇ ದೂರು ನೀಡಿದ್ರು. ಆದರೆ ಗೃಹ ಸಚಿವರು ಪರಿಷತ್ ನಲ್ಲಿ ಇದರಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ ಎಂದು ಉತ್ತರ ನೀಡಿದ್ರು. ಒಬ್ಬ ಅಭ್ಯರ್ಥಿಯಿಂದ 70, ರಿಂದ 80 ಲಕ್ಷ ರೂ ಲಂಚ ಪಡೆದು ಆಯ್ಕೆ ಮಾಡಿದ್ದಾರೆ . ಅಧಿಕಾರಿಗಳು,ಗೃಹ ಸಚಿವರು ಇದರ ಹಿಂದೆ ಇದ್ದಾರೆ. ಈ ಎರಡು ಪ್ರಕರಣದಲ್ಲಿ ಇನ್ನು 4 ವಿಕೇಟ್ ಹೋಗುತ್ತೆ ಎಂದು ಆರೋಪಿಸಿದರು.

ಭ್ರಷ್ಟಾಚಾರ ಪ್ರಕರಣ ನಾವು ಸಹಿಸೋಲ್ಲ ಎಂದ ಖರ್ಗೆ ಅವರು ಸಿಎಂ ಕ್ರಮ ತೆಗೆದುಕೊಳ್ಳಲಿ. ಸರಿಯಾಗಿ ತನಿಖೆ ನಡೆಸಿದ್ರೆ ಅರ್ಧ ಸಚಿವ ಸಂಪುಟ ಬಿದ್ದೊಗುತ್ತೆ ಎಂದು ಹೇಳಿದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago