News Karnataka Kannada
Monday, April 29 2024
ಬೆಂಗಳೂರು ನಗರ

ಬಿಜೆಪಿ ಗೆಲುವಿಗಾಗಿ ಮೋದಿ ವಿನಮ್ರತೆಯಿಂದ ಶ್ರಮಿಸುತ್ತಿದ್ದಾರೆ; ಹೆಚ್. ಡಿ. ದೇವೇಗೌಡ

Kalaburagi: 'Neither HDK nor I have done politics based on money'
Photo Credit :

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ನಿಷ್ಠೆಯನ್ನು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಪ್ರಶಂಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಗೆಲುವಿಗಾಗಿ ವಿನಮ್ರತೆಯಿಂದ ಶ್ರಮಿಸುತ್ತಿದ್ದಾರೆ.

ನಾಲ್ಕು ದಿಕ್ಕಿನಲ್ಲಿ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತಿದ್ದಾರೆ. ಈಗಾಗಲೇ ಅವರು ಗುಜರಾತ್ ಚುನಾವಣಾ ತಯಾರಿ ಆರಂಭಿಸಿದ್ದಾರೆ ಎಂದರು.

ಕೇಂದ್ರದಲ್ಲಿ ಮನ ಮೋಹನ್ ಸಿಂಗ್ ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿಯನ್ನು ಹಿಮ್ಮುಖ ಮಾಡಲು ಸಾಧ್ಯವಾಗಿಲ್ಲ ಅನ್ನೋದು ವಾಸ್ತವಾಂಶವಾಗಿದ್ದು, ಕಾಂಗ್ರೆಸ್ ಈಗ ಬಲಹೀನವಾಗಿದೆ. ಅದು ಕೆಲವೇ ರಾಜ್ಯಗಳಿಗೆ ಸೀಮಿತವಾದ ಪ್ರಾದೇಶಿಕ ಪಕ್ಷದಂತೆ ಆಗಿದೆ. ಕರ್ನಾಟಕದ ಕಾಂಗ್ರೆಸ್ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ ಎಂದರು. ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಅಸಮಾಧಾನ ಸರಿಪಡಿಸಿ, ಒಟ್ಟಿಗೆ ಕರೆದೊಯ್ದಿದ್ದರೆ ಈಗಿನ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು

ಪಕ್ಷ ಸಂಘಟನೆಗಾಗಿ ಇದೇ ತಿಂಗಳ 20ನೇ ತಾರೀಖು ಮುಂದಿನ ಹೋರಾಟದ ಕಾರ್ಯಕ್ರಮ ರೂಪಿಸುತ್ತೇವೆ. ಎರಡೆರಡು ಜಿಲ್ಲೆಗೆ ಒಂದು ಸಭೆ ಮಾಡುತ್ತೀವಿ. ಬೆಂಗಳೂರಿನಲ್ಲಿ ಸಮಾವೇಶ ನಡೆಸಲಾಗುವುದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಸಮಾನ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್ ಎಂಎಲ್ಸಿ ಸಿ. ಎಂ.ಇಬ್ರಾಹಿಂ ಪಕ್ಷ ಸೇರ್ಪಡೆ ಕುರಿತು ಮಾತನಾಡಿದ ದೇವೇಗೌಡರು, ಇದು ಹಲವಾರು ತಿಂಗಳಿನಿಂದ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ನಲ್ಲಿ ಅವರಿಗೆ ಸಾಕಷ್ಟು ನೋವು ನೀಡಲಾಗಿದೆ. ಆದರೆ, ಇದರ ಬಗ್ಗೆ ನನ್ನ ಬಳಿ ಬಂದು ಪಕ್ಷ ಸೇರುವ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ. ಮುಂದೇನಾಗುತ್ತೆ ನೋಡೋಣ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು