ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅವರು, ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
— Nalinkumar Kateel (@nalinkateel) January 10, 2022
ಕೆಲ ದಿನಗಳ ಹಿಂದೆ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳುರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ.