ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ನಿಧನರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸಿ.ಟಿ. ರವಿ, ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. ಮೊದಲ ಬಾರಿಗೆ ಅಪ್ಪನಿಲ್ಲದೆ, ಲೋಕವನ್ನು ನಾನೆದುರಿಸಬೇಕಾಗಿದೆ.
ಓಂಶಾಂತಿ ಅಣ್ಣ ಎಂದು ಬರೆದುಕೊಂಡಿದ್ದಾರೆ.
ಸಿ.ಟಿ. ರವಿ ಅವರ ತಂದೆ ತಿಮ್ಮೇಗೌಡ(92) ವಯೋ ಸಹಜ ಅನಾರೋಗ್ಯದಿಂದಾಗಿ ಇಂದು ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಭಾನುವಾರ ಅವರ ಸ್ವಗ್ರಾಮ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ಮೃತರಿಗೆ ಪತ್ನಿ ಹೊನ್ನಮ್ಮ, ಬಿಜೆಪಿ ನಾಯಕ ಸಿ.ಟಿ. ರವಿ ಸೇರಿದಂತೆ, ಸಿ.ಟಿ. ರಘು, ಪುತ್ರಿಯರಾದ ರೋಹಿಣಿ, ರೇವತಿ, ರೇಣುಕಾ ಇದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…