ಬಿಜೆಪಿ ಸುಳ್ಳು ಹಾಗೂ ಹಿಂಸೆ ಹಾದಿಯಲ್ಲಿ ಹೋಗುತ್ತಿದೆ : ಸಿದ್ದರಾಮಯ್ಯ

ಬೆಂಗಳೂರು :  ಮಹಾತ್ಮ ಗಾಂಧಿ  ಅವರು ಸತ್ಯ ಮತ್ತು ಅಹಿಂಸೆಯ ಮಾರ್ಗ ತೋರಿದರೆ ಬಿಜೆಪಿ ಸುಳ್ಳು ಹಾಗೂ ಹಿಂಸೆ ಹಾದಿಯಲ್ಲಿ ಹೋಗುತ್ತಿದೆ. ಗಾಂಧಿಯವರನ್ನು ಹತ್ಯೆ ಮಾಡಿದ ನಾಥೂರಾಮ್‌ ಗೋಡ್ಸೆಯನ್ನು ದೇಶಭಕ್ತ ಎನ್ನುವ ಇಂತಹ ಪಕ್ಷ ಅಧಿಕಾರದಲ್ಲಿದ್ದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಉಳಿಯಲು ಸಾಧ್ಯವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಹಾತ್ಮಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಗಾಂಧಿ ಅವರ ಬಗ್ಗೆ ಲಘುವಾಗಿ ಮಾತನಾಡಿ ಅವರ ವಿಚಾರಧಾರೆಗೆ ವಿರುದ್ಧವಾಗಿ ನಡೆದುಕೊಳ್ಳಲಾಗುತ್ತಿದೆ. ಸತ್ಯ ಹಾಗೂ ಅಹಿಂಸೆ ಗಾಂಧಿ ಅವರ ತತ್ವ. ಆದರೆ ಬಿಜೆಪಿ ಅಸತ್ಯ ಹಾಗೂ ಹಿಂಸೆ ಮೇಲೆ ನಂಬಿಕೆ ಇಟ್ಟಿದೆ ಎಂದು ಹೇಳಿದರು.

ನರೇಂದ್ರ ಮೋದಿ ಅವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಮೋದಿ ಅವರು ಏನು ಹೇಳುತ್ತಾರೋ ಅದರ ವಿರುದ್ಧವಾಗಿ ನಾವು ಅರ್ಥಮಾಡಿಕೊಳ್ಳಬೇಕು. ಅವರು ರೈತರನ್ನು ಉದ್ಧಾರ ಮಾಡುತ್ತೇವೆ ಎಂದರೆ ನಾಶ ಮಾಡುತ್ತೇವೆ ಎಂದರ್ಥ. ಪ್ರಜಾಪ್ರಭುತ್ವ ಉಳಿಸುತ್ತೇವೆ ಎಂದರೆ, ಪ್ರಜಾಪ್ರಭುತ್ವ ನಾಶ ಮಾಡುತ್ತೇವೆ ಎಂದರ್ಥ. ಸಂವಿಧಾನ ರಕ್ಷಣೆ ಮಾಡುತ್ತೇವೆ ಎಂದರೆ, ಅದನ್ನು ನಾಶ ಮಾಡುತ್ತೇವೆ ಎಂದು ಅರ್ಥಮಾಡಿಕೊಳ್ಳಬೇಕು. ಅವರು ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

Raksha Deshpande

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

3 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

3 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

22 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

27 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

31 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

38 mins ago