ಬೆಂಗಳೂರು: ನಮ್ಮ ಸರಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಇಂದಿಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸಿಬಿ ವರದಿ ಸಲ್ಲಿಸಿದ ನಂತರ ಶಿಫಾರಸ್ಸುಗಳನ್ನು ಚಾಚೂ ತಪ್ಪದೆ ಪಾಲಿಸಲಾಗುವುದು. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಸಾರ್ವಜನಿಕರಿಂದಲೂ ಬಿಡಿಎ ಅಕ್ರಮಗಳ ಬಗ್ಗೆ ದೂರುಗಳು ಬಂದಿದ್ದವು. ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ ಅವರೂ ಈ ಬಗ್ಗೆ ನನ್ನ ಗಮನ ಸೆಳೆದಿದ್ದರು. ಸಂಬಂಧಪಟ್ಟ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿತ್ತು. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿರಲಿ, ಅಧಿಕಾರಿಗಳಿರಲಿ ಅವರ ಮೇಲೆ ಕ್ರಮ ಜರಗಿಸುತ್ತೇವೆ ಎಂದರು.
ಪೂರ್ಣ ಸ್ವಚ್ಛಗೊಳಿಸಬೇಕು ಬಿಡಿಎ ಸಾಮಾನ್ಯ ಜನರಿಗೆ ಅಗತ್ಯವಿರುವ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಬಿಡಿಎ ಸ್ವಚ್ಛಗೊಳಿಸಬೇಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.