ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸೇವೆ ನಿರತ ಅಧಿಕಾರಿಗಳಿಗೆ, ಕೊರೋನಾ ಸೋಂಕು ತಗುಲೋದು ಮುಂದುವರೆದಿದೆ ಇದೀಗ ಬಿಬಿಎಂಪಿಯ ವಿಶೇಷ ಆಯುಕ್ತ ಗೌರವ್ ಗುಪ್ತ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನಗೂ ಇಂದು ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಸೌಮ್ಯ ಲಕ್ಷಣಗಳಿರುವಂತ ನಾನು ವೈದ್ಯರ ಸಲಹೆಯಂತೆ ಹೋಂ ಐಸೋಲೇಷನ್ ನಲ್ಲಿ ಇದ್ದೇನೆ ಎಂದು ತಿಳಿಸಿದ್ದಾರೆ.
ಇದಲ್ಲದೇ ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿರುವಂತ ಅವರು, ಅಗತ್ಯ ಬಿದ್ದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.