News Karnataka Kannada
Tuesday, May 07 2024
ಬೆಂಗಳೂರು ನಗರ

ಬೆಂಗಳೂರಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ

Covid Test
Photo Credit : News Kannada

ಬೆಂಗಳೂರು;  ಬೆಂಗಳೂರಿನಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 100ರ ಗಡಿ ದಾಟಿದೆ. ಮಾರ್ಚ್ 18ರ ಬಳಿಕ ನಗರದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 100ಕ್ಕಿಂತ ಹೆಚ್ಚಾಗಿದೆ.

ಹೆಲ್ತ್ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ ಪತ್ತೆಯಾದ ಹೊಸ ಪ್ರಕರಣಗಳು 139. ಇದರಲ್ಲಿ 132 ಪ್ರಕರಣಗಳು ಬೆಂಗಳೂರಿನಲ್ಲಿಯೇ ದಾಖಲಾಗಿವೆ. ಉಳಿದಂತೆ ಚಿತ್ರದುರ್ಗ 2, ಚಿಕ್ಕಮಗಳೂರು 1, ದಾವಣಗೆರೆ 1, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ರಾಮನಗರದಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.

ಶನಿವಾರದ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು ನಗರ ಜಿಲ್ಲೆಯಲ್ಲಿ 132 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ.

ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ1601. ಒಟ್ಟು ಪ್ರಕರಣಗಳ 1782879. 24 ಗಂಟೆಯಲ್ಲಿ 3878 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ.

24 ಗಂಟೆಯಲ್ಲಿ ರಾಜ್ಯದಲ್ಲಿ 55 ಜನರು ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಯಾರೂ ಸಹ ಮೃತಪಟ್ಟಿಲ್ಲ. ರಾಜ್ಯದ ಸಕ್ರಿಯ ಪ್ರಕರಣಗಳು 1679. ಪಾಸಿಟಿವಿಟಿ ದರ ಶೇ 1.37 ಆಗಿದೆ. ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 3946874. ಇದುವರೆಗೂ ಗುಣಮುಖಗೊಂಡವರು 3905096.

ಆರೋಗ್ಯ ಇಲಾಖೆ ಸ್ಪಷ್ಟನೆ ಬೆಂಗಳೂರು ನಗರದಲ್ಲಿ ಹೊಸ ಕೋವಿಡ್ ಪ್ರಕರಣ ಏರಿಕೆಯಾಗುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಆರೋಗ್ಯ ಇಲಾಖೆ ಆಯುಕ್ತ ರಣದೀಪ್ ಡಿ. ಈ ಕುರಿತು ಟ್ವೀಟ್ ಮಾಡಿದ್ದಾರೆ.

ಕೆಲವು ಮಾಧ್ಯಮಗಳು ಬೆಂಗಳೂರಿನಲ್ಲಿ ಬಿಎ 2.10 ಮತ್ತು ಬಿಎ 2.12 ಮಾದರಿ ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂದು ವರದಿ ಮಾಡುತ್ತಿದೆ. ಆದರೆ ಇದು ಇನ್ನೂ ಖಚಿತವಾಗಿಲ್ಲ. ಐಎನ್‌ಎಸ್‌ಎಸಿಓಜಿ ಪ್ರಯೋಗಾಲಯದ ವರದಿಯೂ ಇದನ್ನು ಖಚಿತಪಡಿಸಿಲ್ಲ ಎಂದು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು