ಬೆಂಗಳೂರು ನಗರ

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸಲು ನೈಟ್ ಕರ್ಫ್ಯೂ ಜಾರಿ ಮಾಡುವ ಚಿಂತನೆ ನಡೆಸಿದ ಬಿಬಿಎಂಪಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಗೆ ಬರುವ ಸಾಧ್ಯತೆ ದಟ್ಟವಾಗಿದೆ.

ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸಲು ಬಿಬಿಎಂಪಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲು ಚಿಂತನೆ ನಡೆಸಿದ್ದು, ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ.

ಡಿಸೆಂಬರ್ 25 ರಿಂದ ಜನವರಿ 5ರವರೆಗೆ 17 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಈಗಗಾಲೇ ದಕ್ಷಿಣ ಆಫ್ರಿಕಾದಿಂದ 75 ಜನರು ಬೆಂಗಳೂರಿಗೆ ಆಗಮಿಸಿದ್ದು, ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಇಬ್ಬರ ಪೈಕಿ ಓರ್ವರಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಲ್ಯಾಬ್ ವರದಿಗಾಗಿ ಕಾಯಲಾಗುತ್ತಿದೆ.

ಒಟ್ಟಾರೆ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಆತಂಕ ಹೆಚ್ಚುತ್ತಿದ್ದು, ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಈ ಬಾರಿಯೂ ಕೊರೊನಾ ಅಡ್ಡಿಯುಂಟು ಮಾಡಲಿದೆ. ಕೋವಿಡ್ ಕಟ್ಟಿಹಾಕಲು ರಾಜ್ಯದಲ್ಲಿ ಮತ್ತೆ ಬಿಗಿ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.

Gayathri SG

Recent Posts

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

15 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

31 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

51 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

2 hours ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago