ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಬ್ಬರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಲಿದೆ ಎನ್ನಲಾಗುತ್ತಿದೆ.
ಇದರ ಬೆನ್ನಲ್ಲೇ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬರಿಗೆ ಓಮಿಕ್ರಾನ್ ವೈರಸ್ ಸೋಂಕು ತಗುಲಿರೋ ಶಂಕೆ ವ್ಯಕ್ತವಾಗಿದೆ. ದುಬೈನಿಂದ ಬೆಂಗಳೂರಿಗೆ ವಾಪಾಸ್ ಆಗಿದ್ದಂತ 60 ವರ್ಷದ ವ್ಯಕ್ತಿಯೊಬ್ಬರಿಗೆ ಓಮಿಕ್ರಾನ್ ಸೋಂಕು ತಗುಲಿರೋ ಶಂಕೆ ಇದೆ. ಈ ಬಗ್ಗೆ ಇಂದು ಸಂಜೆ ಆರೋಗ್ಯ ಇಲಾಖೆಯಿಂದ ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡೋ ಸಾಧ್ಯತೆ ಇದೆ.
ಈಗಾಗಲೇ ರಾಜ್ಯದಲ್ಲಿ 31 ಜನರಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿವೆ. ಇದೇ ಕಾರಣದಿಂದಾಗಿ ಓಮಿಕ್ರಾನ್ ಮತ್ತು ಕೋವಿಡ್ ನಿಯಂತ್ರಣ ಸಂಬಂಧ ಕೇಂದ್ರ ತಂಡ ಕೂಡ ಸದ್ಯದಲ್ಲೇ ಭೇಟಿಯಾಗಿ, ವರದಿಯನ್ನು ಪಡೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ.