ಬೆಂಗಳೂರಿನಲ್ಲಿ ವಾರಾಂತ್ಯಕರ್ಫ್ಯೂ, ಶಾಲೆಗಳಿಗೆ ಆನ್‌ಲೈನ್ ತರಗತಿ

ಬೆಂಗಳೂರು:  ವಾರಾಂತ್ಯದ ಲಾಕ್‌ಡೌನ್ ಜಾರಿ ಹಾಗೂ ನೈಟ್‌ ಕರ್ಫ್ಯೂ ಎರಡು ವಾರ ಮುಂದುವರಿಕೆ, ಬೆಂಗಳೂರಿನಲ್ಲಿ 10-12ನೇ ತರಗತಿ ಹೊರತುಪಡಿಸಿ ಉಳಿದೆಲ್ಲಾ ಶಾಲೆಗಳನ್ನು ಮುಚ್ಚಿ ಕೇವಲ ಆನ್‌ಲೈನ್ ತರಗತಿ ನಡೆಸಲು ಸರ್ಕಾರ ತೀರ್ಮಾನ ಮಾಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಕೊರೊನಾ ವಿಷಯಕ್ಕೆ ಸಂಬಂಧಿಸಿದಂತೆ ತಜ್ಞರ ಸಭೆ ಕರೆಯಲಾಗಿತ್ತು.

ಜ.7 ಶುಕ್ರವಾರ ರಾತ್ರಿ 10ರಿಂದ ಸೋಮವಾರ ಜ.10ರವರೆಗೆ ವಾರಾಂತ್ಯದ ಕರ್ಫ್ಯೂ ಇರುತ್ತದೆ. ಇದರ ಜೊತೆಗೆ ಮುಂದಿನ ಎರಡು ವಾರ ರಾತ್ರಿ ಕರ್ಫ್ಯೂ ಮುಂದುವರಿಯುತ್ತದೆ ಎಂದು ಸಭೆಯ ಬಳಿಕ ಸಚಿವರಾದ ಆರ್. ಅಶೋಕ್ ಮತ್ತು ಡಾ.ಕೆ. ಸುಧಾಕರ್ ಹೇಳಿದರು.

ರಾಜ್ಯದಲ್ಲಿ ಜಾರಿ ಮಾಡಬೇಕಾದ ಕಠಿಣ ರೂಲ್ಸ್‌ಗಳು, ಬೆಡ್‌ಗಳ ಲಭ್ಯತೆ, ಔಷಧಗಳ ದಾಸ್ತಾನು ಸಹಿತ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಗಿದೆ.

ಶಾಲೆಗಳಿಗೆ ಆನ್‌ಲೈನ್ ತರಗತಿ:

ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕರೆಯಿಸದೆ ಆನ್‌ಲೈನ್ ಮೂಲಕ ಮಾತ್ರ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ. ನಗರ ಪ್ರದೇಶಗಳಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಬೆಂಗಳೂರಲ್ಲಿ 10-12ನೇ ತರಗತಿ ಹೊರತುಪಡಿಸಿ ಉಳಿದೆಲ್ಲಾ ಶಾಲೆ ಮುಚ್ಚಲು ತೀರ್ಮಾನಿಸಲಾಗಿದೆ. ಇದು ಪದವಿ ಕಾಲೇಜುಗಳಿಗೂ ಅನ್ವಯಿಸುತ್ತದೆ ಎಂದು ಸಚಿವರು ಹೇಳಿದರು.

ಸರ್ಕಾರಿ ಕಚೇರಿಗಳು ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲು ತೀರ್ಮಾನಿಸಿ. ಉಳಿದಂತೆ ಚಿತ್ರಮಂದಿರ, ಮಾಲ್, ಬಾರ್, ಕ್ಲಬ್‌ಗಳಿಗೆ ಶೇ 50ರಷ್ಟು ಮಾತ್ರ ಆಸನಗಳ ಭರ್ತಿಗೆ ಅವಕಾಶ ನೀಡಲಾಗಿದೆ.

ಮಹಾರಾಷ್ಟ್ರ,ಕೇರಳ ಮತ್ತು ಗೋವಾದಿಂದ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಮತ್ತು ನೆಗೆಟಿವ್‌ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ವಿದೇಶಿ ಪ್ರಯಾಣಿಕರಿಗೆ ಭಾರತ ಸರ್ಕಾರದ ಮಾರ್ಗಸೂಚಿಗಳನ್ನು ಅನ್ವಯ ಮಾಡಲಾಗುತ್ತದೆ.

Swathi MG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

3 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

3 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

3 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

3 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

5 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

5 hours ago