ಬೆಂಗಳೂರು : ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನರು ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ.ಬಾಲಕಿ ಮೇಲೆ 8 ಜನರು ನಿರಂತರ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ.
ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ಮೇಲೆ 8 ಜನ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ವಿಡಿಯೋ ಮಾಡಿ ಈ ವಿಚಾರವನ್ನು ಯಾರಿಗಾದ್ರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ವಿಷಯ ತಿಳಿದ ಪೋಷಕರು ಯಲಹಂಕ ಪೊಲೀಸ್ ಠಾಣೆಗೆ ಪೊಲೀಸರು ದೂರು ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ 7 ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.