ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕ ಎದುರಾಗಿರುವ ಬೆನ್ನಲ್ಲೇ ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಬರ್ತ್ ಡೇ ಪಾರ್ಟಿ ಮಾಡಿದ್ದ 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ ಅಪಾರ್ಟ್ ಮೆಂಟ್ ಸೀಲ್ ಡೌನ್ ಮಾಡಲಾಗಿದೆ. ಪಾರ್ಟಿಗೆ ಬಂದಿದ್ದ ಸಂಬಂಧಿಕರ ಮನೆಗಳೂ ಸೀಲ್ಡೌನ್ ಮಾಡಲಾಗಿದೆ.
ಇನ್ನು ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ 10 ಮಂದಿಗ ಕೊರೊನಾ ಸೋಂಕು ದೃಢಪಟ್ಟಿದೆ.