ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಕೆರೆ ಗೇಟ್ ಬಳಿಯಿರುವ ಶಾಪಿಂಗ್ ಮಾಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೀಟ್ ಪೊಲೀಸರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ರಾತ್ರಿಯಿಂದ ನಗರದಲ್ಲಿ ವಾರಾಂತ್ಯ ಕರ್ಫ್ಯೂ ಹಿನ್ನೆಲೆ ಶಾಪಿಂಗ್ ಮಾಲ್ನಲ್ಲಿ ಯಾವುದೇ ಜನರು, ಸಿಬ್ಬಂದಿ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಶಾಪಿಂಗ್ ಮಾಲ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.
6 ಆಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ನಿರಂತರ ಎರಡು ಗಂಟೆಗಳ ಕಾರ್ಯಾಚರಣೆ ಬಳಿ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಶಾಪಿಂಗ್ ಮಾಲ್ನ ಗ್ರೌಂಡ್ ಪ್ಲೋರ್ನಲ್ಲಿರುವ ಸೂಪರ್ ಮಾರ್ಕೆಟ್ನ ಸ್ಟೋರೇಜ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.