ಬೆಂಗಳೂರಿನ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಕೆರೆ ಗೇಟ್ ಬಳಿಯಿರುವ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೀಟ್ ಪೊಲೀಸರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಶುಕ್ರವಾರ ರಾತ್ರಿಯಿಂದ ನಗರದಲ್ಲಿ ವಾರಾಂತ್ಯ ಕರ್ಫ್ಯೂ ಹಿನ್ನೆಲೆ ಶಾಪಿಂಗ್ ಮಾಲ್‌ನಲ್ಲಿ ಯಾವುದೇ ಜನರು, ಸಿಬ್ಬಂದಿ ಇರಲಿಲ್ಲ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಶಾಪಿಂಗ್ ಮಾಲ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

6 ಆಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ನಿರಂತರ ಎರಡು ಗಂಟೆಗಳ ಕಾರ್ಯಾಚರಣೆ ಬಳಿ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಶಾಪಿಂಗ್‌ ಮಾಲ್‌ನ ಗ್ರೌಂಡ್ ಪ್ಲೋರ್‌ನಲ್ಲಿರುವ ಸೂಪರ್ ಮಾರ್ಕೆಟ್‌ನ ಸ್ಟೋರೇಜ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

 

Swathi MG

Recent Posts

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

10 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

43 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

57 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

2 hours ago