ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಗರದಲ್ಲಿ ದಾಳಿ ಮಾಡುತ್ತಿದ್ದು, ಗುರುವಾರ ಬೆಳಗ್ಗೆ ಐಟಿ ಅಧಿಕಾರಿಗಳು ಕೆಲವು ಉದ್ಯಮಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗ್ಗೆ ಆರು ಗಂಟೆಗೆ ಆದಾಯ ತೆರಿಗೆ ಅಧಿಕಾರಿಗಳು ಅಮಾನುಲ್ಲಾ ಖಾನ್, ಕಮಲ್ ಪಾಷಾ, ನಯೀಜ್ ಖಾನ್ ಮನೆಗಳ ಮೇಲೆ ದಾಳಿ ಮಾಡಲಾಗಿದೆ.
ಬೆಂಗಳೂರಿನ 20ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ ಎಂದು ವರದಿಗಳು ಹೇಳಿವೆ.