ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 205 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,58,904ಕ್ಕೆ ಏರಿಕೆಯಾಗಿದೆ.
147 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,36,936ಕ್ಕೆ ಏರಿಕೆ ಕಂಡಿದೆ.
ಬೆಂಗಳೂರು ನಗರದಲ್ಲಿ ಇಂದು ಮೂವರು ಕೊರೊನಾ ಸೋಂಕಿನಿಂದ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 16,365 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,602 ಸಕ್ರಿಯ ಪ್ರಕರಣಗಳಿವೆ.