News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು ನಗರದಲ್ಲಿ ಆಸ್ಪತ್ರೆ ಸೇರುವ ಕೋವಿಡ್ ಸೋಂಕಿತರ ಸಂಖ್ಯೆ ಶೂನ್ಯ!

Covid 19
Photo Credit :

ಬೆಂಗಳೂರು: ಕಳೆದ 10 ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ.ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಸಹ ಕುಸಿತವಾಗಿದೆ.

ಫೆಬ್ರವರಿ 26ರ ಬಳಿಕ ಯಾವುದೇ ಸೋಂಕಿತರು ಬೆಂಗಳೂರು ನಗರದಲ್ಲಿ ಆಸ್ಪತ್ರೆಗೆ ದಾಖಲಾಗಿಲ್ಲ. ಕೋವಿಡ್ 3ನೇ ಅಲೆ ಪ್ರಾರಂಭವಾದ ಬಳಿಕ ಮೊದಲ ಬಾರಿಗೆ ಯಾರೂ ಸಹ ಆಸ್ಪತ್ರೆ ಸೇರಿಲ್ಲ.

ಕೋವಿಡ್ ಎರಡನೇ ಅಲೆ ಉತ್ತುಂಗದಲ್ಲಿ ಇದ್ದಾಗ ಬೆಂಗಳೂರು ನಗರದಲ್ಲಿ ಆಸ್ಪತ್ರೆಗೆ ದಾಖಲಾಗುವ ಸೋಂಕಿತರ ಪ್ರಮಾಣ ಶೇ 21ಆಗಿತ್ತು. ಮೂರನೇ ಅಲೆ ಸಂದರ್ಭದಲ್ಲಿ ಇದು ಶೇ 5 ಆಗಿತ್ತು. ಫೆಬ್ರವರಿ 26ರ ಬಳಿಕ ಯಾರೂ ಸಹ ಆಸ್ಪತ್ರೆಗೆ ದಾಖಲಾಗಿಲ್ಲ.

ಕಳೆದ 10 ದಿನದಲ್ಲಿ ಆಸ್ಪತ್ರೆಗೆ ದಾಖಲಾಗುವ ಕೋವಿಡ್ ಸೋಂಕಿತರ ಸಂಖ್ಯೆ ಶೇ 10 ರಿಂದ 0ಗೆ ಇಳಿಕೆಯಾಗಿದೆ. ಫೆಬ್ರವರಿ ತಿಂಗಳಿನಲ್ಲಿ ನಗರದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. 28 ದಿನದಲ್ಲಿ 30,870 ಜನರಿಗೆ ಸೋಂಕು ತಗುಲಿದೆ. ಜನವರಿಯಲ್ಲಿ ಸೋಂಕಿತರ ಸಂಖ್ಯೆ 4,56,462 ಆಗಿತ್ತು.

ಜನವರಿ ತಿಂಗಳಿನಲ್ಲಿ ನಗರದಲ್ಲಿ ಕೇವಲ 191 ಜನರು ಸಾವನ್ನಪ್ಪಿದ್ದರು. ಆದರೆ ಫೆಬ್ರವರಿಯಲ್ಲಿ ಮೃತಪಟ್ಟವರ ಸಂಖ್ಯೆ 315. 2021ರ ಮೇ ತಿಂಗಳಿನಲ್ಲಿ 6,971 ಜನರು ಸಾವನ್ನಪ್ಪಿದ್ದರು. ನಗರದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 1,69,28 ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು